
ಲಕ್ಷ್ಮೇಶ್ವರ,ಏ20 : ಪಟ್ಟಣದ ಆದರ್ಶ ಬಾರ್‍ನಲ್ಲಿ ಲೆಕ್ಕದ ಪುಸ್ತಕದಲ್ಲಿ ನಮೂದಿಸಿದ ಬೀರ್ ಬಾಕ್ಸ್‍ಗಳಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಅಬಕಾರಿ ವಿಚಕ್ಷಕ ದಳದ ಭರತೇಶ ನೇತೃತ್ವದಲ್ಲಿ ಅಬಕಾರಿ ಸಿಬ್ಬಂದಿ ದಾಳಿ ನಡೆಸಿ ಅಂದಾಜು 4 ಲಕ್ಷ ರೂಪಾಯಿ ಕಿಮ್ಮತ್ತಿನ 200 ಬೀರ್ ಬಾಕ್ಸ್‍ಗಳನ್ನು ವಶಕ್ಕೆ ಪಡೆದ ಘಟನೆ ಬುಧವಾರ ಜರುಗಿದೆ.
ಘಟನೆ ವಿವರ: ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಬಕಾರಿ ಎಸ್‍ಪಿ ಭರತೇಶ ಅವರು ತಮ್ಮ ಸಿಬ್ಬಂದಿಯೊಂದಿಗೆ ಆದರ್ಶ ಬಾರ್‍ಗೆ ಭೇಟಿ ನೀಡಿ ಪರಿಶೀಲಿಸಿದಾಗ ಲೆಕ್ಕದ ಪುಸ್ತಕದಲ್ಲಿ ವ್ಯತ್ಯಾಸ ಕಂಡು ಬಂದಿತು. ಇದರಿಂದಾಗಿ ಸಂಶಯಗೊಂಡ ಅವರು ಎಲ್ಲ ಬೀರ್ ಬಾಕ್ಸ್‍ಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.