ಲೈಂಗಿಕ ಕಿರುಕುಳ: ಆರೋಪಿ ಸೆರೆ

ಮಂಗಳೂರು, ಜು.೧೮- ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ಈ ಸಂದರ್ಭ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಗೆ ಜೂ.10ರಿಂದ ಜು.8ರ ಮಧ್ಯೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಜು.8ರಂದು ರಾತ್ರಿ 8.30ಕ್ಕೆ ವಿದ್ಯಾರ್ಥಿನಿಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ. ಆದರೆ ವಿದ್ಯಾರ್ಥಿನಿ ಹೆದರಿ ಮನೆಯವರಿಗೆ ವಿಷಯ ತಿಳಿಸಿರಲಿಲ್ಲ. ಜು.16ರಂದು ತಾಯಿಗೆ ವಿಷಯ ತಿಳಿಸಿದ ಬಳಿಕ ವಿದ್ಯಾರ್ಥಿನಿ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಿಳಾ ಪೊಲೀಸರು ತಿಳಿಸಿದ್ದಾರೆ.