ಲೈಂಗಿಕ ದೌರ್ಜನ್ಯ ಆರೋಪ ತರುಣ್ ತೇಜ್‌ಪಾಲ್ ಖುಲಾಸೆ


ಪಣಜಿ,ಮೇ.೨೧- ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರ ವಿರುದ್ಧದ ಎಲ್ಲ ಲೈಂಗಿಕ ದೌರ್ಜನ್ಯ ಆರೋಪಗಳನ್ನು ನ್ಯಾಯಲಯ ಖುಲಾಸೆಗೊಳಿಸಿದೆ.
ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.
ಕಳೆದ ಏಪ್ರಿಲ್ ೨೭ರಂದೇ ಪ್ರಕರಣದ ತೀರ್ಪು ಪ್ರಕಟಿಸಬೇಕಿತ್ತು. ಆದರೆ ನ್ಯಾಯಾಧೀಶರು ತೀರ್ಪು ನೀಡುವ ದಿನಾಂಕವನ್ನು ಮೇ ೧೨ಕ್ಕೆ ಮುಂದೂಡಿದ್ದರು. ಬಳಿಕ ಈ ದಿನಾಂಕವನ್ನು ಮೇ ೧೯ಕ್ಕೆ ನಿಗದಿ ಮಾಡಲಾಗಿತ್ತು.
ಆದರೆ, ೧೯ರಂದು ವಿದ್ಯುತ್ ಕಡಿತದ ಕಾರಣ ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು.
ಪ್ರಕರಣದ ತೀರ್ಪನ್ನು ಪ್ರಕಟಿಸಿರುವಂತ ಗೋವಾ ಸೆಷನ್ಸ್ ನ್ಯಾಯಾಲಯವು, ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತರುಣ್ ತೇಜ್ ಪಾಲ್ ನಿರ್ದೋಷಿ ಎಂಬುದಾಗಿ ತನ್ನ ಆದೇಶವನ್ನು ಪ್ರಕಟಿಸಿದೆ.
೨೦೧೩ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ನ ಲಿಫ್ಟ್‌ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ತರುಣ್ ಎದುರಿಸುತ್ತಿದ್ದರು.