ಲೋಕಸಭಾ ಚುನಾವಣೆ: ಚುನಾವಣಾ ವೆಚ್ಚದ ತರಬೇತಿ


ಸಂಜೆವಾಣಿ ವಾರ್ತೆ
ಹೊಸಪೇಟೆ ಏ 04 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎಸ್‍ಟಿ, ವಿಎಸ್‍ಟಿ, ವಿವಿಟಿ, ಎಸ್‍ಎಸ್‍ಟಿ ತಂಡದ ಸಿಬ್ಬಂದಿಗೆ ಚುನಾವಣಾ ವೆಚ್ಚದ ತರಬೇತಿ ಕಾರ್ಯಕ್ರಮವು ಹೊಸಪೇಟೆ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಬುಧುವಾರ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಅವರು ಮಾತನಾಡಿ, ಚುನಾವಣೆಗಳು ಪ್ರಜಾಪ್ರಭುತ್ವ ದೇಶವೊಂದರ ಅತಿ ಪ್ರಮುಖ ಮತ್ತು ಸೂಕ್ಷ್ಮ ಘಟ್ಟವಾಗಿದೆ. ಆದ್ದರಿಂದ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯು ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳುವುದು ಚುನಾವಣಾ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿದೆ ಎಂಬುದನ್ನು ಅರಿಯಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ ಸಿ.ಜಿ., ಲೆಕ್ಕಾಧಿಕಾರಿಗಳಾದ ರಿಯಾಜ್ ಮತ್ತು ದಿನೇಶ ತರಬೇತಿ ಕಾರ್ಯಕ್ರಮದಲ್ಲಿ ಚುನಾವಣೆ ವಚ್ಚ ವಿಡಿಯೋ ದಾಖಲೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಮಾತನಾಡಿದರು. ಜಿಲ್ಲಾ ಪಂಚಾಯತ್‍ನ ವಿನಯ್‍ಕುಮಾರ ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದರು.