ಲೋಕಸಭಾ ಚುನಾವಣೆ ಹಿನ್ನೆಲೆ:ಪೋಸ್ಟಲ್ ಬ್ಯಾಲೆಟ್ ಪೇಪರ್ ಮುದ್ರಣ ಕಾರ್ಯಕ್ಕೆ ಅಧಿಕಾರಿಗಳ ನೇಮಕ

ಕಲಬುರಗಿ:ಮಾ.30: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೋಸ್ಟಲ್ ಬ್ಯಾಲೆಟ್, ಟೆಂಡರ್ ಬ್ಯಾಲೆಟ್ ಪೇಪರ ಮುದ್ರಣ ಕಾರ್ಯಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ (ಗ್ರಾ.ಕೈ) ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಬ್ದುಲ್ ಅಜೀಮ್ ಅವರನ್ನು ಅಧಿಕೃತ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.
ಈ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಏಪ್ರಿಲ್ 22 ರಂದು ಅಂತಿಮವಾಗಿ ಸಿದ್ದಪಡಿಸಿದ ನಮೂನೆ-7ಎ ಪರಿಶೀಲನೆಗೆ ಎಲ್ಲಾ ಅಭ್ಯರ್ಥಿಗಳ ವಿವರಗಳೊಂದಿಗೆ ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳಿಗೆ ತೆರಳಿ ಕರಡು ಮತಪತ್ರವನ್ನು ಅಲ್ಲಿಂದ ಅನುಮೋದನೆ ಪಡೆದು ಅವಶ್ಯಕ ಸಂಖ್ಯೆಯಲ್ಲಿ ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಣ ಮಾಡಿಕೊಂಡು ಬರಲು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.