ಲೋಕಸಭಾ ಸಾರ್ವತ್ರಿಕ ಚುನಾವಣೆ-2024:ಎರಡನೇ ದಿನದಂದು ನಾಲ್ಕು ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆ

ಕಲಬುರಗಿ:ಏ.15:ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಸೋಮವಾರದಂದು ನಾಲ್ಕು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿ ಅವರು 1 ನಾಮಪತ್ರ, ಸೋಷಾಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಶರಣಬಸಪ್ಪ ಮಲ್ಲಿಕಾಜಪ್ಪ ಅವರು 2 ನಾಮಪತ್ರ, ಪ್ರಹಾರ ಜನಶಕ್ತಿ ಪಾರ್ಟಿಯ ಅಭ್ಯರ್ಥಿಯಾಗಿ ವಿಜಯಕುಮಾರ ಭೀಮಶಾ ಅವರು 1 ನಾಮಪತ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ರಮೇಶ ಭೀಮಸಿಂಗ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 22 ಇರುತ್ತದೆ. ಇಲ್ಲಿಯವರೆಗೆ 6 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಸಿದಂತಾಗಿದೆ.