ಲೋಕಸಭೆಯಲ್ಲಿ ಕೃಷಿ ಕಾಯ್ದೆ ವಾಪಸ್ ಮಸೂದೆಗೆ ಅಂಗೀಕಾರ

ವಿಪಕ್ಷಗಳ ಗದ್ದಲ

ನವದೆಹಲಿ, ನ. ೨೯- ಪ್ರತಿಪಕ್ಷಗಳ ಸದಸ್ಯರ ಗದ್ದಲ ಗಲಾಟೆ , ಮಾತಿನ ಚಕಮಕಿಯ ನಡುವೆ ಲೋಕಸಭೆಯಲ್ಲಿ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಯಾವುದೇ ಚರ್ಚೆ ಇಲ್ಲದೆ ಹಿಂದಕ್ಕೆ ಪಡೆಯುವ ಮಸೂದೆಗಳಿಗೆ ಅಂಗೀಕಾರ ದೊರೆತಿದೆ. ಬಳಿಕ ಕಲಾಪವನ್ನು ಭೋಜನ ವಿರಾಮಕ್ಕೆ ಮುಂದೂಡಿದೆ.
ಕೃಷಿ ಕಾಯ್ದೆಯ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಚರ್ಚೆಗೆ ಬಿಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಕೆಲ ಕಾಲ ಮುಂದೂಡಲಾಗಿತ್ತು ಮತ್ತೆ ಸದನ ಸಮಾವೇಶಗೊಂಡಾದ ಪ್ರತಿಪಕ್ಷಗಳ ಸದಸ್ಯರ ಗದ್ದಲ ಗಲಾಟೆ ನಡುವೆಯೇ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೃಷಿ ಕಾಯ್ದೆಗಳಿಂದ ಹಿಂದಕ್ಕೆ ಪಡೆಯುವ ಮಸೂದೆಯನ್ನು ಮಂಡಿಸಿದರು.
ಇದರಿಂದಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಕೋಲಾಹಲ ನಡೆಯಿತು, ಈ ಹಂತದಲ್ಲಿ ಲೋಕಸಭಾ ಸ್ಪೀಕರ್ ಅವರು ಪ್ರತಿಪಕ್ಷದ ಸದಸ್ಯರು ಶಾಂತಿಯುತವಾಗಿ ವರ್ತಿಸಿ ಸದನ ನಡೆಸಲು ಅವಕಾಶ ಮಾಡಿಕೊಡಿ ಎಂದು ಪದೇಪದೇ ಮನವಿ ಮಾಡಿದರು.
ಇದಕ್ಕೂ ಮುನ್ನ ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ
ಪೆಗಾಸಸ್ ಗೂಢಚರ್ಯೆ ಪ್ರಕರಣ, ಬೆಲೆ ಏರಿಕೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದವು.
ಕೃಷಿ ಕಾಯ್ದೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ಸದಸ್ಯರು ಗದ್ದಲ ಗಲಾಟೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಉಭಯ ಸದನಗಳನ್ನು ಮೊದಲ ದಿನವೇ ಕೆಲ ಕಾಲ ಮುಂದೂಡಲಾಯಿತು.
ಕಾಂಗ್ರೆಸ್ ಟಿಎಂಸಿ, ಡಿಎಂಕೆ, ಎನ್‌ಸಿಪಿ, ಶಿವಸೇನೆ ಎಡ ಪಕ್ಷಗಳು ಸೇರಿದಂತೆ ೧೧ ಪ್ರಮುಖ ವಿರೋಧ ಪಕ್ಷಗಳು ಒಗ್ಗೂಡಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆವು.
ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳ ಮಂಡಿಸಿ ಕಾನೂನಾತ್ಮಕವಾಗಿ ಹಿಂದಕ್ಕೆ ಪಡೆಯುವ ಪ್ರಕ್ರಿಯೆ ಹೀಗೆ ಮುಂದಾಗಿದೆ. ಈ ವಿಷಯದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಪ್ರತಿಪಕ್ಷಗಳ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಉಂಟಾದ ಗಲಾಟೆ ಗದ್ದಲದಿಂದ ಕೆಲಕಾಲ ಮುಂದೂಡುವಂತಾಯಿತು
ವಿರೋಧ ಪಕ್ಷಗಳ ಗದ್ದಲ ಗಲಾಟೆಯಿಂದಾಗಿ ಲೋಕಸಭೆ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮಧ್ಯಾಹ್ನ ೧೨ ಗಂಟೆಗೆ ಮುಂದೂಡಲಾಯಿತು.
ಕೃಷಿ ಕಾಯ್ದೆಯಿಂದ ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಗಲಾಟೆಗೆ ಆಡಳಿತ ಪಕ್ಷ ಬಿಜೆಪಿ ಸದಸ್ಯರು ಕೂಡ ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆರೋಪ ಪ್ರತ್ಯಾರೋಪ ಸುರಿಮಳೆಯಾಗಿ ಕೋಲಾಹಲ ಉಂಟಾಯಿತು.
ಈಗಾಗಲೇ ಸಂಸತ್ ಭವನದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ೧೧ ವಿವಿಧ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು.
ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

ಪ್ರತಿ ಪಕ್ಷಗಳ ಸಭೆ
ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ನಾಯಕರು ಒಗ್ಗೂಡಿ ಹೋರಾಟ ಮಾಡುವ ಸಂಬಂಧ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ವಿರೋಧ ಪಕ್ಷಗಳ ಹಲವು ನಾಯಕರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿವೆ. ಇಂದಿನಿಂದ ಡಿಸೆಂಬರ್ ೨೩ ತನಕ ನಡೆಯಲಿರುವ ಸಂಸತ್ತಿನ ಅಧಿವೇಶನದಲ್ಲಿ ಸರಿಸುಮಾರು ೩೪ ಮಸೂದೆಗಳನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.