ಲೋಕಸಭೆ ಚುನಾವಣೆ:ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ

ಕಲಬುರಗಿ,ಮೇ.21: ಸಾರ್ವತ್ರಿಕ ಲೋಕಸಭೆ ಚುನಾವಣೆಯ ಗುಲಬರ್ಗಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಜೂನ್ 4 ರಂದು ಗುಲಬರ್ಗಾ ವಿ.ವಿ. ಅವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈಮಧೂ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತ ಎಣಿಕೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸಮಕ್ಷಮದಲ್ಲಿ ನ್ಯಾಷನಕ್ ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರ ರೆಡ್ಡಿ ಅವರು ಮತ ಎಣಿಕೆ ಪ್ರಕ್ರಿಯೆ ಕುರಿತು ಸವಿಸ್ತಾರವಾಗಿ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಉಪ ಆಯುಕ್ತ ಮಾಧವ ಗಿತ್ತೆ, ಸಹಾಯಕ ಆಯುಕ್ತರಾದ ರೂಪಿಂದರ್ ಸಿಂಗ್ ಕೌರ್, ಆಶಪ್ಪ ಪೂಜಾರಿ ಸೇರಿದಂತೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ತಾಲೂಕಿನ ತಹಶೀಲ್ದಾರರು ತರಬೇತಿಯಲ್ಲಿ ಭಾಗವಹಿಸಿದ್ದರು.