ಲೋಕಸಭೆ ಚುನಾವಣೆ ಕಾರ್ಯ ಯಶಸ್ವಿ ನಿರ್ವಹಣೆ:ಸರ್ವರಿಗೂ ಧನ್ಯವಾದ ತಿಳಿಸಿದ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್

ಕಲಬುರಗಿ:ಜೂ.11: ಇತ್ತೀಚೆಗೆ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ನಿರ್ವಹಿಸಿ ಜಿಲ್ಲಾಡಳಿತಕ್ಕೆ ಉತ್ತಮ ಹೆಸರು ಬರುವ ರೀತಿಯಲ್ಲಿ ಕಾರ್ಯನಿರ್ವಹಿಸಿದ ಜಿಲ್ಲಾಡಳಿತದ ಎಲ್ಲಾ ಹಿರಿಯ ಅಧಿಕಾರಿಗಳನ್ನು ಜಿಲ್ಲಾ‌ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಧನ್ಯವಾದ ತಿಳಿಸಿದ್ದಾರೆ.

ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆ ಜರುಗಲು ಕಾರಣರಾದ ಕಲಬುರಗಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪಂಚಾಯತ ಸಿ.ಇ.ಓ., ಎಸ್.ಪಿ., ವಿಧಾನಸಭಾ ಕ್ಷೇತ್ರಗಳ ಎ.ಆರ್.ಓ., ತಾಲ್ಲೂಕಿನ ತಹಸೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಡಿ.ಸಿ. ಅವರು ಧನ್ಯವಾದ ಅರ್ಪಿಸಿದ್ದಾರೆ.

ಚುನಾವಣಾ ಕಾರ್ಯದಲ್ಲಿ ನಿರತರಾದ ಎಫ್.ಎಸ್.ಟಿ, ಎಸ್.ಎಸ್.ಟಿ., ವಿ.ಎಸ್.ಟಿ., ವಿ‌.ವಿ.ಟಿ., ಅಕೌಂಟಿಂಗ್ ಟೀಂ, ಎ.ಇ.ಓ, ಎಂ.ಸಿ.ಎಂ.ಸಿ ಸೇರಿದಂತೆ ಇನ್ನಿತರ ತಂಡಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಕಂದಾಯ ಇಲಾಖೆಯ ಗ್ರೇಡ್-2 ತಹಸೀಲ್ದಾರರು, ಶಿರಸ್ತೇದಾರರು/ಉಪ ತಹಸೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಚುನಾವಣೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪಾಲ್ಗೊಂಡು ಚುನಾವಣೆಯ ಎಲ್ಲಾ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲು ಸಹಕರಿಸಿದ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ವಿಶೇಷವಾಗಿ ಚುನಾವಣೆಯುದ್ದಕ್ಕು ನ್ಯಾಯಸಮ್ಮತ ಚುನಾವಣೆಗೆ ಮತದಾರರಲ್ಲಿ ಜಾಗೃತಿ ಮೂಡಿಸಿದ ಮಾಧ್ಯಮ ಬಳಗಕ್ಕೂ ಬಿ.ಫೌಜಿಯಾ ತರನ್ನುಮ್ ಅವರು ಅಭಿನಂದನೆ ತಿಳಿಸಿದ್ದಾರೆ.