ಲೋಕಸಭೆ ಚುನಾವಣೆ: ಮತದಾನ ಜಾಗೃತಿಗಾಗಿ ಸೈಕಲ ಜಾಥಾ

ಕಲಬುರಗಿ,ಏ.28- ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡ “ನಮ್ಮ ನಡೆ-ಮತಗಟ್ಟೆ ಕಡೆ” ಮತಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಉದ್ಘಾಟಿಸಿದರು.
ಕಲಬುರಗಿ ನಗರದ ಜಗತ್ ವೃತ್ತದಿಂದ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ನಗರ ಪೆÇಲೀಸ್ ಆಯುಕ್ತ ಆರ್.ಚೇತನ ಕುಮಾರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಕಲಬುರಗಿ ಪೆÇಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡೆಕ್ಕಾ ಕಿಶೋರ್ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ನೋಡಲ್ ಅಧಿಕಾರಿ ಅಬ್ದುಲ್ ಅಜಿಂ ಮುಂತಾದವರು ಭಾಗವಹಿಸಿದ್ದರು.
ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಮಕ್ಕಳು ಇನ್ನಿತರರು ನಗರೇಶ್ವರ ಶಾಲೆವರೆಗೂ ರ್ಯಾಲಿ ನಡೆಸಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲಬುರಗಿ ಸೈಕ್ಲಿಂಗ್ ಕ್ಲಬ್ ಗಳು ಸೈಕಲ್ ಜಾಥಾಗೆ ಸಹಯೋಗ ನೀಡಿದವು.