ಲೋಕಸಭೆ ಚುನಾವಣೆ ಯಶಸ್ವಿ ಸಿಬ್ಬಂದಿಗೆ ಅಭಿನಂದನಾ ಪತ್ರ ವಿತರಣೆ

ಸೇಡಂ, ಮೇ, 30: 2024 ರ ಲೋಕಸಭಾ ಚುನಾವಣೆಗೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದ ಸಿಬ್ಬಂದಿ ವರ್ಗದವರಿಗೆ ಅಭಿನಂದನಾ ಪತ್ರ ವಿತರಿಸುವ ಕಾರ್ಯಕ್ರಮ ಜರುಗಿತು.ಪಟ್ಟಣದಲ್ಲಿರುವ ಸುವರ್ಣ ಕರ್ನಾಟಕ ಭವನದಲ್ಲಿ ಸಹಾಯಕ ಚುನಾವಣಾಧಿಕಾರಿ ಆಶಪ್ಪ ಪೂಜಾರಿ ಹಾಗೂ ತಹಶೀಲ್ದಾರ್ ಶಿವಾನಂದ ಮೇತ್ರೆ ಅವರು ಸಿಬ್ಬಂದಿಗಳಿಗೆ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದರು. ಈ ವೇಳೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹಂಪಣ್ಣ ವೈ ಎಲ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಶಂಕರಯ್ಯ ಸ್ವಾಮಿ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.