ಲೋಕಸಭೆ ವಿಧಾನಸಭೆಯಲ್ಲೂ ಮಹಿಳೆಯರ ಮೀಸಲಾತಿಗೆ ಆಗ್ರಹ

ಬಳ್ಳಾರಿ ಮೇ 13 : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ ಆಗ್ರಹಿಸಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದಂತೆ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಮೂಲಕ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಿ ಎಂದರು.

ರಮ್ಯಾ ಡಿಕೆಶಿ ಟ್ವಿಟ್ ವಾರ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುತ್ತ. ಆ ಟ್ವಿಟ್ ವಾರ್ ಮುಗಿದ ಅಧ್ಯಾಯ. ಆ ಬಗ್ಗೆ ಹಿರಿಯ ನಾಯಕರು ಸ್ಪಷ್ಟನೆ ನೀಡಿದ್ದಾರೆಂದು ಜಾರಿಕೊಂಡರು.

ಮುಂಬರುವ ಚುನಾವಣೆಗಳ ಹಿನ್ನಲೆಯಲ್ಲಿ ಪಕ್ಷ ಸಂಘಟನೆ ಮಾಡೋ ಹಿನ್ನೆಲೆಯಲ್ಲಿ ನಾ ನಾಯಕಿ ಕಾರ್ಯಕ್ರಮ ಮಾಡ್ತಿದ್ದೇವೆಂದರು.

ಇದಕ್ಕೂ ಮುನ್ನ ಮಾಜಿ ಸಚಿವೆ
ಉಮಾಶ್ರೀ, ನೇತೃತ್ವದಲ್ಲಿ ಇಲ್ಲಿನ ಕನಕದಾಸ ವೃತ್ತದಲ್ಲಿ ಪಕ್ಷದ ಮಹಿಳಾ ಕಾರ್ಯಕರ್ತೆಯರಿಂದ . ಬೆಲೆ ಏರಿಕೆ ವಿರುದ್ಧ ಒಲೆ ಹಚ್ಚೋ ಮೂಲಕ ಪ್ರತಿಭಟನೆ ನಡೆಸಿದರು.

ಗ್ಯಾಸ್ ಸಿಲಿಂಡರ್ ಎತ್ತಿ ಹಿಡಿದು ಗೋವಿಂದ ಗೋವಿಂದ ಎಂದರು ಪುಷ್ಪ ಅಮರನಾಥ. ಇತರರು ಸಾಥ್ ನೀಡಿದರು.

ನಂತರ ಖಾಸಗೀ ಹೊಟೇಲ್ ನಲ್ಲಿ ಹಮ್ಮಿಕೊಂಡಿದ್ದ ನಾ ನಾಯಕಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯನ್ನು ಉದ್ಘಾಟನೆ ಮಾಡಿದರು.