
ಕಲಬುರಗಿ:ಸೆ,19:ಇಂದು ನಡೆದ ಮಹತ್ವದ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಸ್ಥಾನಗಳನ್ನು ಮೀಸಲು ಇಡುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಿರುವುದು ಅತ್ಯುತ್ತಮ ಬೆಳವಣಿಗೆಯಾಗಿದ್ದೂ,
ಈ ನಿರ್ಧಾರ ರಾಷ್ಟ್ರದ ಮಹಿಳೆಯರಿಗೆ ನ್ಯಾಯ ಒದಗಿಸಿಂತಾಗಿದ್ದೂ; ಇದು ರಾಷ್ಟ್ರದ ಪ್ರಗತಿಗೆ ನಾಂದಿ ಹಾಡಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ.ಅಂಬಾರಾಯ ಅಷ್ಠಗಿ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದ ಕ್ರಮ ಬರೋಬ್ಬರಿ ಎರಡೂವರೆ ದಶಕದಿಂದ ಕಾಡುತ್ತಿದ್ದ ಮಹಿಳಾ ಮೀಸಲಾತಿ ಪ್ರಶ್ನೆಗೆ ಅಂತಿಮವಾಗಿ ಉತ್ತರ ಸಿಕ್ಕಿದೆ.
ಈ ನಿರ್ಧಾರವು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಆಶಯಕ್ಕೆ ಮನ್ನಣೆ ನೀಡಿದಂತಾಗಿದೆ ಎಂದು ಡಾ. ಅಷ್ಠಗಿ ಪ್ರತಿಕ್ರಿಯಿಸಿದ್ದಾರೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಸಭೆ ನಡೆಸಲಾಗಿತ್ತು.
ಇದೇ ಸಭೆಯಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡುವ ಕ್ರಮಕ್ಕೆ ಒಪ್ಪಿಗೆ ಸೂಚಿಸಿರುವ ಸುದ್ದಿ ಸಂಚಲನ ಸೃಷ್ಟಿಸಿದ್ದು, ಇದು ಮೋದಿ ಯವರ ಆಡಳಿತದ ಗರಿಮೆಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಡಾ.ಅಂಬಾರಾಯ ಅಷ್ಠಗಿ ಹೇಳಿದ್ದಾರೆ.