ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕಲಬುರಗಿ.ಫೆ.24:ಕಲಬುರಗಿ ವಿಭಾಗದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ಜಿಲ್ಲೆಯ ಈ ಕೆಳಕಂಡ ತಾಲೂಕುಗಳಿಗೆ ಇದೇ ಫೆಬ್ರವರಿ 27 ಹಾಗೂ 28 ರಂದು ಭೇಟಿ ನೀಡಿ ಸಾರ್ವಜನಿಕರ ಅಹವಾಲು/ಕುಂದುಕೊರತೆಗಳನ್ನು ಸ್ವೀಕರಿಸಲಿದ್ದಾರೆ ಕಲಬುರಗಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮಾಡುತ್ತಿದ್ದಲ್ಲಿ ಅಥವಾ ಕಾರಣ ಇಲ್ಲದೆ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಲ್ಲಿ ಅಥವಾ ಅನಗತ್ಯ ಕಚೇರಿಗೆ ಅಲೆದಾಡಿಸುತ್ತಿದ್ದಲ್ಲಿ ಸಾರ್ವಜನಿಕರು ಈ ಕೆಳಕಂಡ ದಿನಾಂಕದಂದು ನಡೆಯುವ ಅಹವಾಲು ಸ್ವೀಕಾರ ಸಭೆಗೆ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಬಹುದಾಗಿದೆ.
ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಸಿದ್ದಲಿಂಗಪ್ಪಗೌಡ ಆರ್. ಪಾಟೀಲ ಅವರು ಇದೇ ಫೆಬ್ರವರಿ 27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಗೆ ಕಮಲಾಪುರ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಮಂಜುನಾಥ ಕೆ. ಗಂಗಲ್ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ನಾನಾಗೌಡ ಆರ್. ಪಾಟೀಲ ಅವರು ಫೆಬ್ರವರಿ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಗೆ ಚಿಂಚೋಳಿ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಸಿದ್ದಲಿಂಗಪ್ಪಗೌಡ ಆರ್. ಪಾಟೀಲ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಧ್ರುವತಾರಾ ಅವರು ಇದೇ ಫೆಬ್ರವರಿ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಳಂದ ತಹಶೀಲ್ದಾರರ ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ ಕಂಪೌಂಡ, ಕಲಬುರಗಿ-585102 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-295364, 263745 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.