ಲೋಕಾಯುಕ್ತ ಜನಸಂಪರ್ಕ ಸಭೆ

ಗದಗ,ಏ13 : ಗದಗ ತಹಶೀಲ್ದಾರರ ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಪೆÇಲೀಸ್ ಉಪಾಧೀಕ್ಷಕರಾದ ಶಂಕರ. ಎಂ. ರಾಗಿ, ಪೆÇಲೀಸ್ ನಿರೀಕ್ಷಕರಾದ ರವಿ ಪುರುಶೋತ್ತಮ್ ಮತ್ತು ಎ.ಆರ್. ಕಲಾದಗಿ, ಕರ್ನಾಟಕ ಲೋಕಾಯುಕ್ತ ಗದಗ ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಭ್ರಷ್ಟಾಚಾರ ತಡೆಗಟ್ಟುವ ಬಗ್ಗೆ ಜಾಗೃತಿ ಅರಿವು ಮೂಡಿಸಲಾಯಿತು. ತಹಶೀಲ್ದಾರ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಗಟ್ಟುವ ಬಗ್ಗೆ ಭಿತ್ತಿಪತ್ರಗಳನ್ನು ಅಂಟಿಸಲಾಯಿತು ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.