ಲೋಕ ಚುನಾವಣೆಗೆ ತಯಾರಿ:ಕೊಲ್ಕತ್ತದಲ್ಲಿ ಶಾ ಶಕ್ತಿ ಪ್ರದರ್ಶನ

ಕೋಲ್ಕತ್ತಾ,ನ.೨೯- ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಲ್ಕತ್ತಾದಲ್ಲಿಂದು ಭರ್ಜರಿ ಚುನಾವಣಾ ಪ್ರಚಾರಕ್ಕೆ ಮಧ್ಯಾಹ್ನದ ನಂತರ ಮುನ್ನುಡಿ ಬರೆಯಲಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬೃಹತ್ ಚುನಾವಣಾ ರ್‍ಯಾಲಿಗೆ ಚಾಲನೆ ನೀಡುವ ಮೂಲಕ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಅಮಿತ್ ಶಾ ಅಭಿಯಾನ ಆರಂಭಿಸಲಿದ್ದಾರ
೨೦೨೪ ರ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮುಂಬರುವ ಪ್ರಚಾರಕ್ಕೆ ಅಡಿಪಾಯ ಹಾಕುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಿಂದಲೇ ಚುನಾವಣಾ ಪ್ರಚಾರ ಆರಂಭಿಸುವ ಮೂಲಕ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷ ಅಧಿಕಾರ ಹಿಡಿಯುವ ವಿಶ್ವಾಸ ಹೊಂದಿದೆ. ೪೦ಕ್ಕೂ ಅಧಿಕ ಲೋಕಸಭಾ ಸ್ಥಾನಗಳಿರುವ ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಅಮಿತ್ ಷಾ ಮತ್ತು ಬಿಜೆಪಿ ನಾಯಕರಿಗೆ ಇದೆ ಪ್ರಚಾರ ಆರಂಭಿಸಿದ್ದಾರೆ
೩೫ ಸ್ಥಾನ ಗೆಲ್ಲುವ ಗುರಿ:
ಪಶ್ಚಿಮ ಬಂಗಾಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಕನಿಷ್ಠ ೩೫ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ೪೨ ಕ್ಷೇತ್ರಗಳ ಪೈಕಿ ೧೮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು ಹೀಗಾಗಿ ಈ ಬಾರಿ ಕನಿಷ್ಠ ೩೫ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದೆ.

ಟಿಎಂಸಿಯಿಂದ ಗೇಲಿ: ೨೦೨೧ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಭಿಯಾನವನ್ನು ಎಲ್ಲರಿಗಿಂತಲೂ ಮುಂಚೆ ಆರಂಭಿಸಿ ಬಿಜೆಪಿ ಪಕ್ಷ ಹೀನಾಯ ಸೋಲು ಕಂಡಿತು ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಸೋಲು ಕಾಣಲಿದೆ ಎಂದು ಆಡಳಿತ ಪಕ್ಷ ಟಿಎಂಸಿ ನಾಯಕ ಕುನಾಲ್ ಘೋಷ್ ಲೇವಡಿ ಮಾಡಿದ್ದಾರೆ.ಈ ಬಾರಿಯೂ ಕೂಡ ಪಶ್ಚಿಮ ಬಂಗಾಳದಲ್ಲಿ ಆಡಳಿತ ರೂಢ ತೃಣ ಮೂಲ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ