ವಕೀಲರ ಆರ್ಥಿಕ ಅಭಿವೃದ್ಧಿಗೆ ಸಂಘದ ಕಾರ್ಯ ಶ್ಲಾಘನೀಯ

ಧಾರವಾಡ, ಜ.5: ವಕೀಲರ ಆರ್ಥಿಕ ಅಭಿವೃದ್ಧಿಗೆ ವಿವಿಧ ಬಗೆಯ ಸೇವೆಯನ್ನು ನೀಡುತ್ತಿರುವ ಧಾರವಾಡ ಜಿಲ್ಲಾ ವಕೀಲರ ಸೌಹಾರ್ದ ಸಹಕಾರಿ ಸಂಘದ ಚಟುವಟಿಕೆಗಳು ಸಹಾಯಕವಾಗಿವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ರವಿ ಹೊಸಮನಿಯವರು ಹೇಳಿದರು.

ಸಂಘದ ವತಿಯಿಂದ ಪ್ರಕಟಿಸಿದ 2023 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ನ್ಯಾಯಮೂರ್ತಿ ರವಿ ಹೊಸಮನಿ ಅವರು ಸಂಘದ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ, ಸಹಕಾರ ಸಂಘಗಳ ಉಪನಿಬಂಧಕಿ ಆರ್.ಟಿ. ಪೋಳ, ಧಾರವಾಡ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಪೊಲೀಸ್ ಪಾಟೀಲ್, ಕಾರ್ಯದರ್ಶಿ ಎನ್.ಆರ್. ಮಟ್ಟಿ, ಉಚ್ಚ ನ್ಯಾಯಾಲಯ ವಕೀಲರ ಸಂಘದ ಅಧ್ಯಕ್ಷ ಸುರೇಶ ಹುಡೇದಗಡ್ಡಿ, ಧಾರವಾಡದ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಹಾಗೂ ವಕೀಲರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನ್ಯಾಯಮೂರ್ತಿ ರವಿ ಹೊಸಮನಿ ಹಾಗೂ ಉಪನಿಬಂಧಕಿ ಆರ್.ಟಿ. ಪೋಳ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷರಾದ ವಿ.ಡಿ. ಕಾಮರಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅನೂಪ ದೇಶಪಾಂಡೆ ಕಾರ್ಯಕ್ರಮ ನಿರ್ವಹಿಸಿದರು.