ವಚನಾನಂದ ಶ್ರೀಗಳ ಆಶೀರ್ವಾದ ಪಡೆದ ರಾಹುಲ್ ಗಾಂಧಿ

ದಾವಣಗೆರೆ.ಮೇ.4: ಎಐಸಿಸಿ ನಿಕಟಪೂರ್ವ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ, ಮಾಜಿ ಸಚಿವರಾದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಮಾಯಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್.ಬಸವಂತಪ್ಪ ಅವರನ್ನು ಹರಿಹರ ವೀರಶೈವ-ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಮಹಾಸ್ವಾಮಿಗಳವರು ಆಶೀರ್ವದಿಸಿದರು.ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದಿಗಾವಿ ಶ್ರೀನಿವಾಸ್ ಅವರ ಪರ ಪ್ರಚಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ಹರಮಠಕ್ಕೆ ಭೇಟಿ ನೀಡಿದ ವೇಳೆ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಕೆ.ಎಸ್.ಬಸವಂತಪ್ಪ ಅವರನ್ನು ಶ್ರೀಗಳು ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಹರಿಹರ ಪಂಚಮಸಾಲಿ ವೀರಶೈವ-ಲಿಂಗಾಯಿತ ಮಠದ ಧರ್ಮದರ್ಶಿ ಬಿ.ಸಿ.ಉಮಾಪತಿ, ಹರ ಜಾತ್ರೆಯ ಅಧ್ಯಕ್ಷರಾದ ವಕೀಲ ಪ್ರಕಾಶ್ ಪಾಟೀಲ್ ಮತ್ತಿತರರಿದ್ದರು.