ವಚನ ಕಮ್ಮಟ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಗೆ ರಾಜ್ಯಕ್ಕೆ 3ನೇ ಱ್ಯಾಂಕ್

ಸಂಡೂರು: ನ 05: ಕಾಲೇಜಿನ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಪ್ರತಿಯೊಬ್ಬ ಉಪನ್ಯಾಸಕರೂ ಸಹ ಶ್ರಮಿಸುತ್ತಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಹೆಮ್ಮೆಯನ್ನು ಉಂಟುಮಾಡುತ್ತದೆ, ಕಾಲೇಜಿನಲ್ಲಿ ಮುರುಘಾಮಠ ಚಿತ್ರದುರ್ಗದ ವತಿಯಿಂದ ವಚನ ಕಮ್ಮಟ ಪರೀಕ್ಷೆಗಳಲ್ಲಿ ನಮ್ಮ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ, ಅಲ್ಲದೆ ಇಡೀ ರಾಜ್ಯಕ್ಕೆ ಕುಮಾರಿ ವೆಂಕಟಮ್ಮ ಬಿ.ಎಂ. 3ನೇ ರ್ಯಾಂಕ್ ಪಡೆಯುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದು, ಕಾಲೇಜು ಸದಾ ಉತ್ತಮ ಬೆಳವಣಿಗೆಗೆ ಬೆಂಬಲಿಸುತ್ತದೆ ಎಂದು ಪ್ರಾಚಾರ್ಯರಾದ ಡಾ. ಹುಚ್ಚು ಸಾಬ್ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕಿ ಈ.ಜಿ. ರೇಖಾ ಅವರು ಸಂಯೋಜಕರಾಗಿ ಕಾರ್ಯನಿರ್ವಹಿಸಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆಗಳನ್ನು ಬರೆಯಲು ಎಲ್ಲಾ ರೀತಿಯ ತರಬೇತಿಯನ್ನು ನೀಡಿದ್ದು ಅವರಿಗೂ ಸಹ ಸನ್ಮಾನಿಸಿ ಗೌರವಿಸುವ ಮೂಲಕ ಮುರುಘಾಮಠದವರು ಅಭಿನಂದಿಸಿದ್ದು ಉತ್ತಮವಾದುದು, ಇನ್ನೂ ಹೆಚ್ಚು ರೀತಿಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಕನ್ನಡ ಸಾಹಿತ್ಯ, ಸಂಸ್ಕೃತಿ, ಜನಪದ ಕಲೆಗಳಲ್ಲಿಯೂ ಸಹ ತರಬೇತಿಯನ್ನು ನೀಡುವಂತಹ ಕಾರ್ಯಗಳನ್ನು ನಿರಂತರವಾಗಿ ಮಾಡುತ್ತಿದ್ದು ಇವರಿಗೂ ಸಹ ಅಭಿನಂದನೆಗಳನ್ನು ಕಾಲೇಜಿನ ಎಲ್ಲಾ ಸಿಬ್ಬಂದಿವರ್ಗದವರು ಸಲ್ಲಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು, ಭಾಗವಹಿಸಿದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.