ವಯೋನಿವೃತ್ತಿ ಹೊಂದಿದ ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರಿಗೆ ಸನ್ಮಾನ

ಕಲಬುರಗಿ:ಆ.2: ಹುಬ್ಬಳ್ಳಿಯ ನವನಗರದಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ವಲಯ ಕಛೇರಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ವಯೋನಿವೃತ್ತಿ ನಿಮಿತ್ತದ ಬೀಳ್ಕೊಡುಗೆ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಉಸ್ತುವಾರಿಗಳು ಹಾಗೂ ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತ ಮಾರುತಿ ಭೋಯಿ ಅವರಿಗೆ ಕಲಬುರಗಿ ಕ್ಷೇತ್ರಿಯ ಭವಿಷ್ಯ ನಿಧಿ ಕಛೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸನ್ಮಾನಿಸಿ ಗೌರವಿಸಿದರು.

ಅಪರ ಕೇಂದ್ರೀಯ ಭವಿಷ್ಯ ನಿಧಿ ಆಯುಕ್ತರು 23 ವರ್ಷಗಳಿಗಿಂತ ಹೆಚ್ಚು ಕಾಲ ಕೇರಳ, ಕರ್ನಾಟಕ, ತಮಿಳುನಾಡು, ಆಸ್ಸಾಂ, ತೆಲಂಗಾಣ, ಉತ್ತರಪ್ರದೇಶ ಹಾಗೂ ನವದೇಹಲಿಯ ಮುಖ್ಯ ಕಛೇರಿಯಲ್ಲಿ ವಿವಿಧ ಸಾಮಾಥ್ರ್ಯಗಳಲ್ಲಿ ಆಡಳಿತಾತ್ಮಕ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಕಲಬುರಗಿ ಕ್ಷೇತ್ರಿಯ ಭವಿಷ್ಯ ನಿಧಿ ಆಯುಕ್ತರು ಗ್ರೇಡ್-1 ಶ್ರೀ ಡಿ.ಹನುಮಂತಪ್ಪ, ವಿಠ್ಠಲ, ಕೆ.ವಿ ಆನಂದಪ್ಪ, ಹೆಚ್.ಬಿ ಶಿವಪ್ರಸಾದ, ಬಸವರಾಜ ಹೆಳವರ ಯಾಳಗಿ ಹಾಗೂ ಇನ್ನಿತರರು ಭಾಗವಹಿಸಿದ್ದರು.