ವರನಟನ ೧೮ನೇ ಪುಣ್ಯಸ್ಮರಣೆ

ಬೆಂಗಳೂರು,ಏ.೧೨- ವರನಟ ಡಾ.ರಾಜ್‌ಕುಮಾರ್ ಅಗಲಿ ಇಂದಿಗೆ ಬರೋಬ್ಬರಿ ೧೮ ವರ್ಷ. ಅಣ್ಣಾವ್ರು ಭೌತಿಕವಾಗಿ ದೂರವಾದರೂ ಅಭಿಮಾನಿಗಳ ಹೃದಯದಲ್ಲಿ ಸದಾ ಜೀವಂತವಾಗಿದ್ದಾರೆ.
೨೦೦೬ರ ಏಪ್ರಿಲ್ ೧೨ ರಂದು ಮಧ್ಯಾಹ್ನ ೧ ಗಂಟೆಗೆ ಡಾ. ರಾಜ್‌ಕುಮಾರ್ ಇಹಲೋಕ ತ್ಯಜಿಸಿದ್ದರು. ಅಂದು ಇಡೀ ರಾಜ್ಯ ಸ್ತಬ್ಧವಾಗಿತ್ತು. ಅಂದು ಅಣ್ಣಾವ್ರನ್ನು ಕಳೆದುಕೊಂಡ ಅಭಿಮಾನಿ ಬಳಿಕ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಅವರ ಅಂತ್ಯ ಸಂಸ್ಕಾರದಲ್ಲಿ ನಡೆದ ಘಟನೆ ಇದೀಗ ಇತಿಹಾಸ.
ವರನಟ ಅಣ್ಣಾವ್ರ ೧೮ನೇ ಪುಣ್ಯಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಣ್ಣಾವ್ರನ್ನು ಸ್ಮರಿಸಿಕೊಂಡರು. ಈ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ಅಭಿಮಾನಿ ಬಳದ ವತಿಯಿಂದ ಪುಣ್ಯ ಸ್ಮರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದವು.
ರಾಜ್‌ಕುಮಾರ್ ಸಮಾಧಿಗೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ ಅಭಿಮಾನಿಗಳು ಪೂಜೆ ಸಲ್ಲಿಸಿ ಅಣ್ಣಾವ್ರ ನೆನಪು ಮಾಡಿಕೊಂಡರು, ಇದೇ ವೇಳೆ ಪುನೀತ್ ರಾಜ್‌ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿಗೂ ಪೂಜೆ ಸಲ್ಲಿಸಿದರು.
ರಾಜ್ ಕುಮಾರ್ ಅಭಿಮಾನಿ ಸಂಘಗಳು ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸದಾ ಜೀವಂತವಾಗಿ ಇಟ್ಟುಕೊಳ್ಳುವ ಪ್ರಯತ್ನ ಮಾಡಿದ್ದಾರೆ.