ವರುಣಾ ಕ್ಷೇತ್ರದಿಂದ ಸ್ಪರ್ಧೆ ಇಲ್ಲ

ಚಾಮರಾಜನಗರ,ಏ.೧೧- ಈ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್‌ಗೆ ಕೂಡ ಸ್ಪಷ್ಟನೆ ನೀಡಲಾಗಿದೆ. ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ, ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರವಾಗಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೇರೆ ಅವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಿ, ಈಗಾಗಲೇ ಬಿಜೆಪಿ ನಾಯಕರ ಮಕ್ಕಳು ಟಿಕೆಟ್ ಕೇಳುತ್ತಿದ್ದಾರೆ. ಅದಕ್ಕೆ ನಾನು ಕೂಡ ಕೇಳಿದ್ದೀನಿ ಎಂದರು.ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.