ವರುಣ ಕುಮಾರ್ ಗೆ ಪ್ರಥಮ ಸ್ಥಾನ

ಕಲಬುರಗಿ:ಸೆ.17:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪರಿಸರ ಸ್ನೇಹಿ ಗಣೇಶೋತ್ಸವ ಸ್ಪರ್ಧೆಯಲ್ಲಿ ನಮ್ಮ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯ ವಿದ್ಯಾರ್ಥಿ ವರುಣ ಕುಮಾರ್ ಸುರೇಶ್ ಕುಮಾರ್ ಕ್ಲೇ ಮಾಡಲಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ. ಇದೇ ಸ್ಪರ್ಧೆಯ ಚಿತ್ರಕಲಾ ವಿಭಾಗದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿ ಕಿರಣ ಕಂಠೆಪ್ಪ ತೃತೀಯ ಸ್ಥಾನ ಪಡೆದಿದ್ದಾನೆ.
ಕಲಬುರಗಿಯ ಮಹಾತ್ಮಾ ಬಸವೇಶ್ವರ ನಗರದ ಎಸ್.ಜಿ.ಎನ್. ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ಪರ್ಧೆಯಲ್ಲಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ್ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಸಿ.ಎನ್.ಮಂಜಪ್ಪ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ವಿಜ್ಞಾನ ಪರಿಷತ್ ರಾಜ್ಯಾಧ್ಯಕ್ಷ ಗಿರೀಶ್ ಕಡ್ಲೆವಾಡ ಹಾಗೂ ಕಾಲೇಜಿನ ಪ್ರಾಂಶುಪಾಲ ಶಿವರಾಜ ಶೀಲವಂತ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಆದಂ ಪಟೇಲ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.