ವಲಸೆ ಕಾರ್ಮಿಕರ ಅಳಲು ಆಲಿಸಲು ‘ಕಂಟ್ರೋಲ್ ರೂಂ’ ಆರಂಭ

ನವದೆಹಲಿ, ಏ. ೨೨: ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ನಡುವೆ, ದೇಶದ ವಿವಿಧ ರಾಜ್ಯ ಸರ್ಕಾರಗಳು ಕೆಲವು ನಿರ್ಬಂಧಗಳನ್ನು ಹೇರುತ್ತಿವೆ. ಈ ವೇಳೆಯಲ್ಲಿ ಕಾರ್ಮಿಕರ ಹಿತ ದೃಷ್ಟಿಯಿಂದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ೨೦ ನಿಯಂತ್ರಣ ಕೊಠಡಿಗಳನ್ನು ಪುನಶ್ಚೇತನಗೊಳಿಸಿದೆ.

ಕಾರ್ಮಿಕರ ವೇತನ ಸಂಬಂಧಿತ ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ವಲಸೆ ಕಾರ್ಮಿಕರ ಸಮಸ್ಯೆಗಳನ್ನು ತಗ್ಗಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹೇಳಿದೆ.

ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಮಾತನಾಡಿ, ಈ ಸೌಲಭ್ಯವನ್ನು ಕಳೆದ ಏಪ್ರಿಲ್‌ನಲ್ಲಿ ಪ್ರಾರಂಭಿಸಲಾಯಿಗಿತ್ತು . ಈಗ ಮತ್ತೆ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಇದನ್ನು ಮತ್ತೆ ಪುನರುಜ್ಜೀವನಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರು, ನಿಯಂತ್ರಣ ಕೊಠಡಿಗಳನ್ನು ಇಮೇಲ್, ಮೊಬೈಲ್ ಮತ್ತು ವಾಟ್ಸಾಪ್ ಮೂಲಕ ಪ್ರವೇಶಿಸಬಹುದು ಎಂದು ಸಚಿವಾಲಯ ತಿಳಿಸಿದೆ. ಎಲ್ಲಾ ೨೦ ಕಾಲ್ ಸೆಂಟರ್ಗಳ ಕಾರ್ಯಚಟುವಟಿಕೆಯನ್ನು ಮುಖ್ಯ ಕಾರ್ಮಿಕ ಆಯುಕ್ತರು ಪ್ರತಿದಿನವೂ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.