
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.22: ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಶಿಷ್ಠ ಪದವಿಪೂರ್ವ ಕಾಲೇಜಿನ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಶೇ.97.21ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜು ಪ್ರಾರಂಭಗೊಂಡ ತೃತೀಯ ವರ್ಷದಲ್ಲೇ ಬಳ್ಳಾರಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ನೀಡಿ ಕಾಲೇಜಿನ ಕೀರ್ತಿ ಪತಾಕೆಯನ್ನು ಎತ್ತಿಹಿಡಿದಿದ್ದಾರೆ.
ವಿದ್ಯಾರ್ಥಿನಿ ವರ್ಷ ವಿ ಇಜಾರಿ 600ಕ್ಕೆ 584 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಲ್ಲದೆ ಅನೇಕ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದಿರುತ್ತಾರೆ.
ಮಾನಸ-574, ಕೆ.ಆರ್.ಸಾಯಿ ಶರಣ- 574, ಇಶೀತಾ ಚೌದರಿ ನಟ್ಟಮ್ -570, ಮೊಹಮದ್ ಹಾಜಿ ವಿ-570, ಯು.ರಶ್ಮಿ -570, ಕೆ.ಪ್ರೀತಿ ಚೌಧರಿ- 569, ಮಮತ ಎಲ್ ರಾಥೋಡ್- 567, ವರ್ಷ ಎಂ-566, ಎ.ಚೇತನ್ ಕುಮಾರ್-565, ಜಿ.ಪ್ರೀತಿ-565, ಕೊಂಜಿಟಿ ವೆಂಕಟ ಮನೀಷ್-565 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಾಲೇಜ್ ನ ವತಿಯಿಂದ 144 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 163 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.