ವಸತಿ ನಿಲಯದ ಮೇಲ್ವಿಚಾರಕಿಯನ್ನು ಮರು ನೇಮಕ ಮಾಡುವಂತೆ ಒತ್ತಾಯ

ರಾಯಚೂರು,ನ.೨೯ – ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯ ಹಾಗೂ ಇಂಜಿನೀಯರಿಂಗ್ ಬಾಲಕೀಯರ ವಸತಿ ನಿಲಯದ ಮೇಲ್ವಿಚಾರಕರನ್ನು ಮರು ನೇಮಕ ಮಾಡಬೇಕು ಎಂದು ಒತ್ತಾಯಿಸಿ ವಸತಿ ನಿಲಯದ ವಿದ್ಯಾರ್ಥಿನೀಯರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಬಿ.ಸಿ.ಎಮ್ ವೃತ್ತಿಪರ, ಇಂಜಿನೀಯರಿಂಗ್ ಬಾಲಕೀಯರ ವಸತಿ ನಿಲಯದಲದಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಸಿ.ಕೆ ಪವಿತ್ರ ಅವರು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಈ ಮೇಲ್ವಿಚಾರಕಿಯರನ್ನು ಏಕಾಏಕಿ ವರ್ಗಾವಣೆ ಮಾಡಿ ಮೂಲ ಕೆಲಸಕ್ಕಾಗಿ ಕಳುಹಿಸುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.
ಆದ್ದರಿಂದ ಕೂಡಲೇ ಮೇಲ್ವಿಚಾರಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪವಿತ್ರ ಸಿ.ಕೆ ಅವರನ್ನು ವಸತಿ ನಿಲಯದ ಮೇಲ್ವಿಚಾರಕಿಯನ್ನಾಗಿ ಮರು ನೇಮಕ ಮಾಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.