ವಸತಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು:ಜ:06: ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಉನ್ನತ ಶಿಕ್ಷಣ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನೀಡುತ್ತಿರುವ ಊಟ ಸರಿಯಿಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ಕಾರಣದಿಂದ ಮುಚ್ಚಿದ್ದ ವಸತಿ ನಿಲಯಗಳು ತರಗತಿಗಳು ಆರಂಭವಾಗುತ್ತಿದ್ದಂತೆ ತೆರೆದುಕೊಂಡಿವೆ. ನಾವು ವಸತಿ ನಿಲಯಕ್ಕೆ ಬಂದು ಒಂದು ವಾರವಾಯಿತು. ಇಲ್ಲಿ ನಮಗೆ ಚೆನ್ನಾಗಿರೋ ಊಟ ನೀಡುತ್ತಿಲ್ಲ, ಕಳಪೆ ಊಟ ನೀಡಲಾಗುತ್ತಿದೆ. ಅದನ್ನು ಸೇವಿಸಿ ನಾವು ಅನಾರೋಗ್ಯ ಪೀಡಿತರಾದಲ್ಲಿ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಅಷ್ಟೇ ಅಲ್ಲದೇ ಸ್ನಾನಕ್ಕೆ ಬಿಸಿ ನೀರು ಬರುತ್ತಿಲ್ಲ. ವಸತಿ ನಿಲಯದಲ್ಲಿ ಹಲವು ಸಮಸ್ಯೆಗಳಿವೆ ಅವುಗಳನ್ನು ಕೂಡಲೇ ಪರಿಹರಿಸಿ ಎಂದು ಆಗ್ರಹಿಸಿದರು.
50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.