ವಸತಿ ಶಾಲೆಯಲ್ಲಿ ಅಗ್ನಿ ಅವಘಡ: ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ,ಫೆ.28: ವಸತಿ ಶಾಲೆಯಲ್ಲಿ ಅಗ್ನಿ ಅವಘಡದಿಂದ ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಗಾಯಗೊಂಡವರಲ್ಲಿ ಸಾಗರ ಎಂಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ.
ವಿದ್ಯಾರ್ಥಿಗಳಾದ ಸಮರ್ಥ ಹಾಗೂ ಮಲ್ಲಿಕಾರ್ಜುನ ಅವರಿಗೆ ಸಣ್ಣಪುಟ ಗಾಯಗಳಾಗಿವೆ.
ಶಾರ್ಟ್ ಸಕ್ರ್ಯೂಟ್ ನಿಂದಾಗಿ ಹಾಸ್ಟೇಲ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ನಡೆದಿದೆ.
ಇಲ್ಲಿನ ವಸತಿ ಶಾಲೆ ಉದ್ಘಾಟನೆಯಾಗಿ ಕೇವಲ 6 ತಿಂಗಳು ಕಳೆದಿದ್ದು, ವಿದ್ಯಾರ್ಥಿಗಳು ಗಾಯಗೊಂಡಿರುವುದು ಇದು ಎರಡನೇ ಘಟನೆಯಾಗಿದೆ.
ಕೊಠಡಿಗಳಲ್ಲಿ 18 ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ಎಲ್ಲ ವಿದ್ಯಾರ್ಥಿಗಳು ಅವಘಡದಿಂದ ಪಾರಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುದ್ದೇಬಿಹಾಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.