ವಸತಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಜ.9: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಇವರು ಜ.14 ರಂದು ಜಿಲ್ಲೆಯ ಹರಿಹರ ತಾಲ್ಲೂಕಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 10.30 ಕ್ಕೆ ಹರಿಹರಕ್ಕೆ ಆಗಮಿಸಿ ಸಾರ್ವಜನಿರ ಭೇಟಿ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ನಂತರ ಭಾರತೀಯ ಜನತಾ ಪಕ್ಷದ ತಾಲ್ಲೂಕು ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11.30 ಕ್ಕೆ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಸುಕ್ಷೇತ್ರ, ಹರಿಹರ ಇಲ್ಲಿ ಆಯೋಜಿಸಲಾಗಿರುವ ‘ಹರ ಜಾತ್ರಾ ಮಹೋತ್ಸವ-2021’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಕ್ಕೆ ಹರಿಹರದಿಂದ ನಿರ್ಗಮಿಸುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್.ರವಿಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.