ವಾಕಥಾನ್ನಲ್ಲಿ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಡಿಸಿ

ಕೋಲಾರ,ಡಿ,೩೧-ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ ’ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ವರಿಷಧಿಕಾರಿ ಭಾಸ್ಕರ್ ಅವರುಗಳು ಗಾಳಿ ಬಲೂನ್‌ಗಳನ್ನು ಹಾರಿಬಿಟ್ಟು, ಹಸಿರು ನಿಶಾನೆ ಬೀಸಿ ಚಾಲನೆ ನೀಡಿದರು.
ಗಣ್ಯರೊಂದಿಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನಾಗರಿಕರು ’ಸಮೃದ್ಧ ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ತಮ್ಮ ಎಂದಿನ ಬೆಳಗಿನ ವ್ಯಾಯಾಮವನ್ನು ವಿದ್ಯಾರ್ಥಿಗಳೊಂದಿಗೆ ಮಾಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಜಂಟಿ ನಿರ್ದೇಶಕಿ ಸುಮಾ, ಕೃಷಿ ಇಲಾಖೆಯ ಉಪನಿರ್ದೇಶಕಿ ಭವ್ಯರಾಣಿ, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯಡಾ ಡೀನ್ ಶಿವರಾಮ್, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಎಸ್.ಎಂ ಶ್ರೀನಿವಾಸ್, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಶಿವನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಕೃಷಿ ಅಧೀಕ್ಷಕರು ಮಂಜುನಾಥ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಉಪಸ್ಥಿತರಿದ್ದರು.