ವಾಕಥಾನ್‌ಗೆ ಸಂಸದ ಮುನಿಸ್ವಾಮಿ ಚಾಲನೆ

ಕೋಲಾರ,ಜ.೧೦ ಸ್ವಾಮಿ ವಿವೇಕಾನಂದರ ಜನ್ಮ ದಿನಾಚಣೆ ಹಿನ್ನಲೆ ಕೋಲಾರದಲ್ಲಿ ಹಮ್ಮಿಕೊಂಡಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಸಂಸದ ಎಸ್.ಮುನಿಸ್ವಾಮಿ ಚಾಲನೆ ನೀಡಿದರು.
ಕೋಲಾರ ನಗರದ ಜೂನಿಯರ್ ಕಾಲೇಜು ಮೈದಾನದಿಂದ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕ್ರಮದಲ್ಲಿ ನೆರೆದಿದ್ದವರೊಂದಿಗೆ ಹೆಚ್ಚೆ ಹಾಕಿದರು. ಇನ್ನು ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ವಾಕಥಾನ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಸ್ವಾಮಿ ವಿವೇಕಾನಂದರ ಕುರಿತು ಜೈಕಾರಗಳನ್ನ ಹಾಕಿದರು.
ನಂತರ ಮಾತನಾಡಿದ ಸಂಸದ ಎಸ್.ಮುನಿಸ್ವಾಮಿ ಅವರು, ಸ್ವಾಮಿ ವಿವೇಕಾನಂದರು ಭಾರತ ಪ್ರಭಾವಿ ಹಾಗೂ ತತ್ವಜ್ಞಾನಿಗಳಲ್ಲಿ ಒಬ್ಬರಾಗಿದ್ದು, ನಿರ್ಭಯತೆ,ಆಶಾವಾದತೆ ಸೇರಿದಂತೆ ಸಾಮಾಜಿಕ ಸಮಸ್ಯೆಗಳ ಕುರಿತು ವಿಶಾಲ ದೃಷ್ಟಿಯುಳ್ಳವರಾಗಿದ್ದರು ಎಂದರು. ಹೀಗಾಗಿ ಸ್ವಾಮಿ ವಿವೇಕಾನಂದರ ಜನ್ಮದಿನವನ್ನ ರಾಷ್ಟ್ರೀಯ ದಿನ ಎಂದು ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಇನ್ನು ಕಾರ್ಯಕ್ರಮದಲ್ಲಿ ಕೂಡಾ ಅದ್ಯಕ್ಷ ಓಂ ಶಕ್ತಿ ಚಲಪತಿ, ಬಿಜೆಪಿ ಜಿಲ್ಲಾದ್ಯಕ್ಷ ವೇಣುಗೋಪಾಲ್, ಅಪ್ಪಿ, ಸುರೇಶ್, ಕಿಶೋರ್, ಬಾಲಾಜಿ ಮತ್ತಿತರರು ಹಾಜರಿದ್ದರು.