ವಾಜಪೇಯಿ ರಾಷ್ಟ್ರಕಂಡ ಅಪರೂಪದ ನಾಯಕ

ಸವಣೂರ,ಡಿ25: ಭಾರತ ರತ್ನ, ರಾಷ್ಟ್ರ ಹಿತಚಿಂತಕ, ರಾಷ್ಟ್ರ ರಾಜಕೀಯ ರಂಗದಲ್ಲಿ ಅಜಾತಶತ್ರು, ಚಾಣಾಕ್ಷ ರಾಜಕಾರಣಿ ಎಂದೇ ಪ್ರಖ್ಯಾತರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತ ಕಂಡ ಅಪರೂಪದ ಮಹಾ ರಾಜಕೀಯ ನಾಯಕರಲ್ಲಿ ಒಬ್ಬರು ಎಂದು ಬಿಜೆಪಿ ತಾಲೂಕಧ್ಯಕ್ಷ ಗಂಗಾಧರ ಬಾಣದ ಹೇಳಿದರು.

ನಗರದ ಭರಮಲಿಂಗೇಶ್ವರ ವೃತ್ತದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96 ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಟಲ್‍ಜೀ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದರು.

ತಮ್ಮ ಅಸಾಮಾನ್ಯ ವಾಕ್ ಚಾತುರ್ಯ ಮತ್ತು ವಾಕ್ಪಟುತ್ವದ ಈ ಮುತ್ಸದ್ದಿ ತಮ್ಮ ಅಧಿಕಾರಾವಧಿಯಲ್ಲಿ ಕೈಗೊಂಡ ದಿಟ್ಟ ಮತ್ತು ದೂರದೃಷ್ಟಿಯ ಕ್ರಮಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಕಾಂಗ್ರೆಸ್ಸೇತರ ಪ್ರಧಾನಮಂತ್ರಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ವಾಜಪೇಯಿ, ಬಿಜೆಪಿಯ ಸೌಮ್ಯವಾದಿ ಧುರೀಣರೆಂದು ಗುರುತಿಸಿಕೊಂಡರು. ಮಾಜಿ ಪ್ರಧಾನಮಂತ್ರಿ ಮತ್ತು ಭಾರತೀಯ ಜನತಾಪಕ್ಷದ ಹಿರಿಯ ಧುರೀಣ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕೇಂದ್ರ ಸರ್ಕಾರ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಿದೆ. ಭಾರತದ ಪ್ರಮುಖ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ಸುವರ್ಣ ಚತುಷ್ಫಥ ರಸ್ತೆ ನಿರ್ಮಾಣ ಯೋಜನೆ ಕೂಡ ವಾಜಪೇಯಿ ಅವರ ಪರಿಕಲ್ಪನೆಯಾಗಿತ್ತು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಓಬಿಸಿ ಮೊರ್ಚಾ ಅಧ್ಯಕ್ಷ ಮಲ್ಲಾರಪ್ಪ ತಳ್ಳಿಹಳ್ಳಿ ಪುರಸಭೆ ಅಧ್ಯಕ್ಷೆ ಶೈಲಾ ಎಚ್ ಮುದಿಗೌಡ್ರ, ಸದಸ್ಯರಾದ ಮಹದೇವ ಮಹೇಂದ್ರಕರ, ರೇಖಾ ಎನ್.ಬಂಕಾಪುರ, ಮಹೇಶ ಮುದಗಲ್, ಜಿಲ್ಲಾ ರೈತಮೋರ್ಚಾ ಕಾರ್ಯದರ್ಶಿ ಹನುಮಂತಗೌಡ ಮುದಿಗೌಡ್ರ, ತಾಲೂಕಾ ಪ್ರಧಾನ ಕಾರ್ಯದರ್ಶಿ ಚನ್ನಬಸವಯ್ಯ ದುರ್ಗದಮಠ, ಮುಖಂಡರಾದ ಶಿವಾನಂದ ಬಡಶೆಟ್ಟಿ, ಬಸನಗೌಡ ಪಾಟೀಲ,ಶಂಕರಗೌಡ ಪಾಟೀಲ, ಸಂಗಮೇಶ ಯರೆಸೀಮಿ, ಮಂಜುನಾಥ ಬೆಣ್ಣಿ, ಸುರೇಶ ಹಿರೆಣ್ಣನವರ, ಗುರುನಗೌಡ ಪಾಟೀಲ, ರಾಮಣ್ಣ ಸಂಕ್ಲಿಪೂರ, ಮೈಲಾರಪ್ಪ ಬಂಕಾಪೂರ, ಸೇರಿದಂತೆ ಹಲವಾರು ಪ್ರಮುಖರು, ಕಾರ್ಯಕರ್ತರು ಇದ್ದರು.