ವಾಜೀದ್ ಸಾಜೀದ್, ಕುಂಚಕಲಾವಿದ ಸೇವಾರತ್ನ ಪ್ರಶಸ್ತಿ

ಮಾನ್ವಿ,ಮಾ.೦೨- ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಫೆ.೨೫ ರಂದು ಪತ್ರಕರ್ತರ ಧ್ವನಿ ಸಂಘದಿಂದ ನಡೆದ ಪ್ರಥಮ ರಾಜ್ಯ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಹಿರಿಯ ಕುಂಚಕಲಾವಿದ ವಾಜೀದ್ ಸಾಜೀದ್ ಇವರಿಗೆ ಕುಂಚಕಲಾ ಸೇವಾರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಅಂತರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯಲ್ಲಿ ಭಾವವಹಿಸಿ ಅನೇಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ವಾಜೀದ್ ಸಾಜೀದ್ ಅವರು ಪಡೆದಿದನ್ನು ಪರಿಗಣಿಸಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದು ಧ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಹೇಳಿದರು..
ಪ್ರಶಸ್ತಿ ಸ್ವೀಕರಿಸುವ ಮುನ್ನ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರ ಚಿತ್ರವನ್ನು ಬಿಡಿಸುವ ಮೂಲಕ ಎಲ್ಲರ ಗಮನ ಸೆಳೆದರು, ಈ ಪ್ರಶಸ್ತಿ ಸ್ವೀಕರಿಸುವುದಕ್ಕೆ ಸಹಕರಿಸಿದ ಎಲ್ಲ ಆತ್ಮೀಯರಿಗೆ ಧನ್ಯವಾದಗಳು ಎಂದು ವಾಜೀದ್ ಸಾಜೀದ್ ತಿಳಿಸಿದರು.