ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿ.ಸಿ. ಆದೇಶ

ಕಲಬುರಗಿ,ಜ.23:ಚಿತ್ತಾಪುರ ತಾಲೂಕಿನ ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಜನವರಿ 23ರ ಮಧ್ಯರಾತ್ರಿ 12 ಗಂಟೆಯಿಂದ ಜನವರಿ 25ರ ಮಧ್ಯರಾತ್ರಿ 12 ಗಂಟೆಯವರೆಗೆ ಚಿತ್ತಾಪುರ ತಾಲೂಕಿನ ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತರಹದ ಮದ್ಯ ತಯಾರಿಕಾ ಘಟಕಗಳನ್ನು, ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಹಾಗೂ ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್ ಅಂಗಡಿಗಳನ್ನು ಮುಚ್ಚುವಂತೆ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
1965ರ ಕರ್ನಾಟಕ ಅಬಕಾರಿ ಕಾಯ್ದೆ ಕಲಂ 21ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.