ವಾಣಿಜ್ಯ ಎಲ್‌ಪಿಜಿ ದರ ೨೫ ರೂ. ಏರಿಕೆ

ನವದೆಹಲಿ,ಮಾ.೧:ತಿಂಗಳ ಆರಂಭದಲ್ಲೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯೆ ೧೯ ಕೆಜಿ ಸಿಲಿಂಡರ್ ದರವನ್ನು ೨೫ ರೂ.ಗಳಿಗೆ ಏರಿಕೆ ಮಾಡಿದೆ. ಪರಿಷ್ಕೃತ ದರಗಳನ್ನು ತಕ್ಷಣದಿಂದಲೇ ಜಾರಿಗೆ ಬರಲಿದೆ. ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಏರಿಕೆ ಮಾಡಿಲ್ಲ.
೨೫ ರೂ. ವಾಣಿಜ್ಯ ಬಳಕೆಯ ಸಿಲಿಂಡರ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲಿ ತಿಂಡಿ-ತಿನಿಸಿನ ದರ ಏರಿಕೆಯಾಗುವ ಸಾಧ್ಯತೆ ಇದೆ.
ದರ ಏರಿಕೆಯಿಂದಾಗಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ದರ ೧,೭೯೫ ರೂ., ಮುಂಬೈನಲ್ಲಿ ೧,೭೪೯,
ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ ೧,೯೬೦ ಹಾಗೂ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ ೧,೮೭೫ ರೂ. ನಷ್ಟಿದೆ.
ಕಳೆದ ೨ ತಿಂಗಳಿನಿಂದ ವಾಣಿಜ್ಯ ಸಿಲಿಂಡರ್ ದರ ಏರಿಕೆ ಮಾಡಲಾಗುತ್ತಿದೆ. ಫೆ. ೧ ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು ೧೪ ರೂ.ಗೆ ಹೆಚ್ಚಳ ಮಾಡಲಾಗಿತ್ತು.