ವಾಣಿಜ್ಯ ಸಪ್ತಾಹ: ರಫ್ತುದಾರರ ಸಮಾವೇಶ- ರಫ್ತು ಅಭಿವೃದ್ಧಿ ಕಾರ್ಯಕ್ರಮ

 ಚಿತ್ರದುರ್ಗ,ಸೆ.25: ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣದಲ್ಲಿ  ಆಜಾದಿಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಬೆಂಗಳೂರು ವಿಟಿಪಿಸಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ರಫ್ತುದಾರರ  ಸಮಾವೇಶ ಮತ್ತು ರಫ್ತು ಅಭಿವೃದ್ಧಿ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಉದ್ಘಾಟಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಬಿ.ಆನಂದ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ರಫ್ತುದಾರರಿಗೆ ವಿಪುಲ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಕೆಂಚವೀರಪ್ಪ, ಸುದರ್ಶನ್, ಮುರೇಶ ಮತ್ತು ಚಿತ್ರದುರ್ಗ ತಾಲ್ಲೂಕಿನ ಮದಕರಿಪುರದ ಮೆ:ನೋರಾ ಆಗ್ರೋದ ಮಾಲೀಕರಾದ ಕುಮಾರ್ ಭಾಗವಹಿಸಿದ್ದರು.