ವಾಯುಭಾರ ಕುಸಿತ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ

ನವದೆಹಲಿ/ಚೆನ್ನೈ, ನ.೧೮- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪುದುಚೇರಿ, ಆಂಧ್ರಪ್ರದೇಶ, ಕರ್ನಾಟಕ, ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿ ಭಾಗದಲ್ಲಿ ಗಂಟೆಗೆ ೪೫ರಿಂದ ೬೫ ಕಿಲೋಮೀಟರ್ ವೇಗದಲ್ಲಿ ಪ್ರಬಲ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿರುವ ನಲ್ಲಿಯಲ್ಲಿ ಕರಾವಳಿ ತೀರ ಪ್ರದೇಶದ ರಾಜ್ಯಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಅದರಲ್ಲೂ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ ಇದರಿಂದಾಗಿ ಅಲ್ಲಿನ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಸಮಸ್ಯೆಗೆ ಸಿಲುಕುವಂತಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ದಕ್ಷಿಣ ಭಾರತ ರಾಜ್ಯಗಳಲ್ಲಿ ಭಾರಿ ಆವಾಂತರ ಸೃಷ್ಟಿಮಾಡಿದೆ.
ಅದರಲ್ಲಿಯೂ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರಬೇಕು ಮತ್ತು ರಾಜ್ಯ ಸರ್ಕಾರಗಳು ಇಂತಹ ಪ್ರದೇಶದಲ್ಲಿರುವ ಜನರ ಸುರಕ್ಷತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಲಾಗಿದೆ.
ಕರಾವಳಿ ತೀರ ಪ್ರದೇಶ ಹೊಂದಿರುವ ರಾಜ್ಯಗಳಲ್ಲಿ ರಾಜ್ಯ ಸರ್ಕಾರಗಳು ಅಗತ್ಯ ಕಟ್ಟೆಚ್ಚರಕ್ಕೆ ವಹಿಸುವುದು ಅಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.