ವಾಯುಭಾರ ಕುಸಿತ ಹಲವೆಡೆ ಮಳೆ ನಿರೀಕ್ಷೆ

ಬೆಂಗಳೂರು,ಮೇ.೨೫-ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರ ಪರಿಣಾಮವಾಗಿ, ಇಂದು ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಟ್ರಫ್ ರಚನೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ ೨೯ರವರೆಗೆ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಮೇ ೨೯ರವರೆಗೆ ಕರ್ನಾಟಕದ ಒಳ ಮತ್ತು ಕರಾವಳಿಯಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೇ ೨೯ರವರೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ಇಂದು ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ವಾಡಿಕೆ ಮಳೆ ಇಲ್ಲ. ಆದರೆ ಮೇ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ.
ದಕ್ಷಿಣ, ಉತ್ತರ ಒಳಭಾಗ ಮತ್ತು ಕರಾವಳಿ ಪ್ರದೇಶಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮೇ ೨೭ ರವರೆಗೆ ಕರಾವಳಿ ಕರ್ನಾಟಕದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮೇ ತಿಂಗಳಲ್ಲಿ ವಾಡಿಕೆ ೮.೯ ಸೆ.ಮೀ ಮಳೆಯ ಬದಲು ೧೧.೩ ಸೆ.ಮೀ. ಮುಂದಿನ ೧ ವಾರ ದಾಖಲೆ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.