(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ:ಮಾ,31- ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ರಾಜಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ.
ಅವರಿಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ. ಅಭಿಪ್ರಾಯ ಸಂಗ್ರಹದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆಂದರು.
ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ರಾಜೀನಾಮೆ ನೀಡುವ ವಿಚಾರ ಮಾಧ್ಯಮಗಳಿಂದ ತಿಳಿದಿದ. ಅವರನ್ನ ಪಕ್ಷದಲ್ಲಿ ಉಳಿಸಿಕೊಳ್ಳಲು ಮಾತುಕತೆ ಮಾಡಲಾಗಿತ್ತು. ಅವರು ಪಕ್ಷ ಬಿಡುವ ಬಗ್ಗೆ ಯಾವುದೇ ಕಾರಣಗಳನ್ನ ಕೊಟ್ಟಿಲ್ಲ. ಚುನಾವಣೆ ಬಂದಾಗ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುವುದು ಸಾಮಾನ್ಯ. ಗೋಪಾಲಕೃಷ್ಣ ಹೊರತುಪಡಿಸಿ ಯಾವ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದ ಅವರು ನಮ್ಮ ಪಕ್ಷಕ್ಕೆ ಬೇರೆ ಪಕ್ಷದಿಂದ ಬರುವವರು ಇದ್ದಾರೆಂದರು.
ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಒಂದು ಕ್ಷೇತ್ರಕ್ಕೆ ಹೋಗಲು ಪರದಾಡುತ್ತಿದ್ದಾರೆ ಅಂದರೆ ಆ ಪಕ್ಷ ಹೀನಾಯವಾಗಿ ಸೋಲುವುದು ಕಾಣುತ್ತದೆಂದರು.
ವರುಣಾ ಕ್ಷೇತ್ರದಿಂದ ವಿಜೇಯೇಂದ್ರ ಸ್ಪರ್ದೆ ವಿಚಾರವಾಗಿ ಪಕ್ಷದಿಂದ ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ನಡೆದಿದೆಂದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಗೋನಾಳ್ ಮುರಹರಗೌಡ, ಸಿರುಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮೊದಲಾದವರು. ಕೆ.ಎಸ್.ದಿನ ವಾಕರ್, ಕೆ.ಎಸ್.ಅಶೋಕ್ ಮೊದಲಾದವರು ಇದ್ದರು.
ನಂತರ ಅವರು ನಗರದ ಜಿಲ್ಲಸ ಬಿಜೆಪಿ ಕಚೇರಿಯಲ್ಲಿ ಜಿಲ್ಲೆಯ ಸಂಡೂರು, ಸಿರುಗುಪ್ಪ, ಕಂಪ್ಲಿ, ಬಳ್ಳಾರಿ ಗ್ರಾಮೀಣ ಮತ್ತು ಬಳ್ಳಾರಿ ನಗರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಅಭಿಪ್ರಾಯ ಸಂಗ್ರಹ ಸಭೆ ನಡೆಸಿದರು.