ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.10:- ವಾರಾಂತ್ಯದ ರಜೆಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ದಂಡೇ ಆಗಮಿಸಿತ್ತು.
ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಈ ಎರಡು ಪರ್ವತ ಶ್ರೇಣಿಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತವೆ. ಭಾನುವಾರಇಲ್ಲಿಗೆ ಭೇಟಿ ನೀಡಿದ್ದ ಸಾವಿರಾರು ಪ್ರವಾಸಿಗರು ಬಿಳಿಗಿರಿರಂಗನಾಥಸ್ವಾಮಿ ಹಾಗೂ ಹಿಮವದ್ ಗೋಪಾಲಸ್ವಾಮಿಯದರ್ಶನ ಪಡೆದರು.
ಜೊತೆಗೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕರ್ನಾಟಕದ ಪ್ರಸಿದ್ಧ ಗಿರಿಧಾಮವಾಗಿದ್ದು, ಹಿಮದ ವಾತಾವರಣ, ವಿಶಾಲ ಹುಲ್ಲುಗಾವಲು, ಶೋಲಾ ಅರಣ್ಯ ಪ್ರವಾಸಿಗರ ಕಣ್ಮನ ಸೆಳೆಯುತದೆ.
ಚಲಿಸುವ ಮೋಡಗಳು, ಜೋರಾಗಿ ಬೀಸುವ ತಂಪು ಗಾಳಿ, ಸುತ್ತಲೂ ಹಿಮ ಆವರಿಸಿರುವುದು ಪ್ರವಾಸಿಗರಿಗೆ ಸ್ವರ್ಗದಅನುಭವ ನೀಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆಇರುವುದರಿಂದ ಪ್ರವಾಸಿಗರ ಸಂಖ್ಯೆ ಭಾರಿ ಪ್ರಮಾಣದಲ್ಲಿಏರಿಕೆಯಾಗಿದೆ. ಜೊತೆಗೆ ಸುಂದರ ಪ್ರವಾಸಿ ತಾಣವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೂ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಇದರಿಂದ ದೇವಸ್ಥಾನಗಳ ಹುಂಡಿಯಆದಾಯ ಹೆಚ್ಚಳವಾಗುವ ಸಾಧ್ಯತೆಇದೆ.