ವಾರಾಂತ್ಯ ಕರ್ಫ್ಯೂ ಸಿಎಂ ವಿವೇಚನೆಗೆ


ಬೆಂಗಳೂರು, ಏ. ೨೫- ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.
ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಯಶಸ್ವಿಯಾಗಿದ್ದು, ಇದರ ಫಲಿತಾಂಶ ೧೦-೧೫ ದಿನಗಳಲ್ಲಿ ಗೊತ್ತಾಗುತ್ತದೆ. ವಾರಾಂತ್ಯ ಕರ್ಫ್ಯೂವನ್ನು ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿಗಳೆ ತೀರ್ಮಾನ ಮಾಡುವರು ಎಂದು ಅವರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.
ನಾಳೆ ಸಚಿವ ಸಂಪುಟ ಸಭೆ ಇದೆ. ಈ ಸಂಪುಟ ಸಭೆಯಲ್ಲಿ ಎಲ್ಲ ಸಚಿವರೊಂದಿಗೆ ಚರ್ಚಿಸಿ ವಾರಾಂತ್ಯ ಕರ್ಫ್ಯೂ ಮುಂದುವರಿಕೆ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ ಎಂದರು.
ರಾಜ್ಯಕ್ಕೆ ಕೇಂದ್ರ ಸರ್ಕಾರ ಅಗತ್ಯ ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆ ಮಾಡುತ್ತಿದೆ. ಸದ್ಯದಲ್ಲೇ ರಾಜ್ಯಕ್ಕೆ ೧.೨೨ ಲಕ್ಷ ರೆಮಿಡಿಸಿವಿರ್ ಮತ್ತು ೮೦೦ ಮೆಟ್ರಿಕ್ ಟನ್ ಆಮ್ಲಜನಕವನ್ನು ಪೂರೈಕೆ ಮಾಡಲಾಗುವುದು ಎಂದು ಅವರು ಹೇಳಿದರು.