
ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.16: ಕೇಂದ್ರ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಮಾಧ್ಯಮ ಗಳು ಪರಿಣಾಮಕಾರಿಯಾಗಿ ಪ್ರಚುರ ಪಡಿಸುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಮಾಡಬೇಕು ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ ತಿಳಿಸಿದರು.ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ ವತಿಯಿಂದ ಆಯೋಜಿಸಿದ್ದ ವಾರ್ತಾಲಾಪ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರ್ಕಾರ ಜನಧನ್, ಪ್ರಧಾನ ಮಂತ್ರಿ ಜೀವನ್ ಸುರಕ್ಷಾ ಬಿಮಾ ಒಳಗೊಂಡಂತೆ ಒಂಭತ್ತು ಯೋಜನೆ ಜಾರಿಗೆ ತಂದಿರುವುದನ್ನು ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡುವ ಮೂಲಕ ಅನುಕೂಲ ಮಾಡಬೇಕೆಂದು ಎಂದು ಮನವಿ ಮಾಡಿದರು.ಮಾಧ್ಯಮ ಕ್ಷೇತ್ರಕ್ಕೆ ಬೆಲೆ ಕಟ್ಟಲಾಗದು. ಅಂತಹ ಗೌರವ, ಘನತೆ ಮಾಧ್ಯಮ ದವರಿಗೆ ಇದೆ. ಯಾರೇ ತಪ್ಪು ಮಾಡಿದರೂ ಅದನ್ನು ಸರಿಪಡಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು. ತಪ್ಪು ಮಾಡದೇ ಇರುವವರು ಯಾರೂ ಇಲ್ಲ. ತಪ್ಪನ್ನು ತಿದ್ದುವುದು ಒಳ್ಳೆಯ ಆರೋಗ್ಯಕರ ಬೆಳವಣಿಗೆ ಎಂದು ತಿಳಿಸಿದರು.ಈ ವೇಳೆಉಪ ವಿಭಾಗಾಧಿಕಾರಿ ಎನ್. ದುರ್ಗಶ್ರೀ, ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ ಮಾತನಾಡಿದರು.ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯಪ್ಪ ಎಸ್. ಪ್ರಕಾಶ್, ಪಾಟೀಲ್ ಇತರರು ಇದ್ದರು.