ವಾರ್ತಾ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಬೀದರ್:ಸೆ.17: ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಜರುಗಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಸುರೇಶ ಸರ್ದಾರ ಪಟೇಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು.
ನಂತರ ರಾಷ್ಟ್ರಧ್ವಜಾರೊಹಣ ಕಾರ್ಯಕ್ರಮ ಜರುಗಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿದೇಶಕ ಸುರೇಶ ರಾಷ್ಟ್ರಧ್ವಜಾರೊಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ವಿಜಯಕೃಷ್ಣ ಸೋಲಪುರ, ನರೇಶ, ತನ್ವಿರ ಇಕ್ಬಾಲ,ಬಿಂದುಸಾರ್ ಧನ್ನೂರ್, ಅವಿನಾಶ, ಗೀತಾಬಾಯಿ, ನಾಗಶೆಟ್ಟಿ, ರಸುಲ್ ಹಾಗೂ ಇತರರು ಹಾಜರಿದ್ದರು.