ವಾರ್ತಾ ಇಲಾಖೆ ಆಯುಕ್ತರಾಗಿ ವಿನೋತ್ ಪ್ರಿಯಾ ಆರ್.

ಕಲಬುರಗಿ,ಏ.29:ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿನೋತ್ ಪ್ರಿಯಾ ಆರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹುದ್ದೆಯ ಪ್ರಭಾರದಲ್ಲಿಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಸೇವೆಗಳು-4) ಸರ್ಕಾರದ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್.ಪಾರೀತ್ ಅಧಿಸೂಚನೆ ಹೊರಡಿಸಿದ್ದಾರೆ.