ವಾರ್ತಾ ಇಲಾಖೆ ಎಡಿರಿಗೆ ಬಿಳ್ಕೋಡುಗೆ

ಕೋಲಾರ, ಸೆ,೨೨-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೋಲಾರ ಜಿಲ್ಲೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಶ್ರೀಮತಿ ಪಲ್ಲವಿ ಹೊನ್ನಾಪುರ ರವರು ಉಪ ನಿರ್ದೇಶಕರ ಹುದ್ದೆಗೆ ಮುಂಬಡ್ತಿಯೊಂದಿಗೆ ವರ್ಗಾವಣೆಯಾಗಿರುವ ನಿಮಿತ್ತ ಇಂದು ಮಧ್ಯಾಹ್ನ ವಾರ್ತಾ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳಿಂzಬೀಳ್ಕೋಡುಗೆ ಸಮಾರಂಭ ಜರುಗಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಈ ಇಲಾಖೆಯಲ್ಲಿ ನನ್ನ ವೃತ್ತಿ ಜೀವನದ ಸುದೀರ್ಘ ಸೇವೆಯನ್ನು ಕೋಲಾರ ಜಿಲ್ಲೆಯಲ್ಲಿ ಸಲ್ಲಿಸಿದ್ದೇನೆ. ಜಿಲ್ಲೆಯ ಕರ್ತವ್ಯದಲ್ಲಿ ಸಾಕಷ್ಟು ಅನುಭವಗಳನ್ನು ಪಡೆದಿದ್ದು, ಮುಂದಿನ ವೃತ್ತಿ ಜೀವನಕ್ಕೆ ಅನುಭವಗಳು ದಾರಿದೀಪವಾಗಿವೆ. ಇಲ್ಲಿ ಕರ್ತವ್ಯ ನಿರ್ವಹಿಸಲು ಸಹಕರಿಸಿದ ಇಲಾಖೆಯ ಸಿಬ್ಬಂದಿ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದಗಳನ್ನು ತಿಳಿಸಿದರು
ಹುದ್ದೆಯ ಪ್ರಭಾರವನ್ನು ಶ್ರೀಮತಿ ಎನ್.ಸೌಮ್ಯ ರವರು ಇಂದು ವಹಿಸಿಕೊಂಡರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿಗಳು ಹಾಗೂ ಮಾಧ್ಯಮ ಮಿತ್ರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.