ವಾರ್ಷಿಕ ಸ್ನೇಹ ಸಮ್ಮೇಳನ

ವಿಜಯಪುರ,12: ವಿಜಯಪುರ ನಗರದ ಯೋಗಾಪೂರದ ಶ್ರೀ ಸತ್ಯ ಸಾಯಿಬಾಬಾ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಜರುಗಿತು. ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಸಂಸ್ಥೆಯ ಅಧ್ಯಕ್ಷ ಡಿ.ಎಚ್. ಜಾಧವ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಜಾಧವ, ಎನ್‍ಎಸ್‍ಯುಐ ಜಿಲ್ಲಾ ಘಟಕದ ಅಧ್ಯಕ್ಷÀ ಅಮಿತ ಚವ್ಹಾಣ, ಸಾಹಿತಿ ಇಂದುಮತಿ ಲಮಾಣಿ, ಮಹಾನಗರ ಪಾಲಿಕೆ ಸದಸ್ಯೆ ಸುಮಿತ್ರಾ ಜಾಧವ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಈ ವಾರ್ಷಿಕ ಸ್ನೇಹ ಸಮ್ಮೇಳನವು ಯಶಸ್ವಿಯಾಗಲು ಕಾರಣಿಭೂತರಾದ ಎಲ್ಲ ಶಿಕ್ಷಕ,ಶಿಕ್ಷಕಿಯರ ಬಳಗ, ಸಿಬ್ಬಂದಿ ವರ್ಗದವರನ್ನು ಸಂಸ್ಥೆಯ ಅಧ್ಯಕ್ಷÀ ಡಿ.ಎಚ್. ಜಾಧವ ಆತ್ಮೀಯವಾಗಿ ಅಭಿನಂದಿಸಿದ್ದಾರೆ.