
ಕರಜಗಿ:ಸೆ.7:ಅಫಜಲಪುರ ತಾಲ್ಲೂಕಿನ ಚಿಂಚೋಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಣ್ಣೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಕಿಯರ
ವಿಭಾಗದ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ,ಕಬಡ್ಡಿ ಹಾಗೂ ಖೋ ಖೋ ದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು ಸರ್ವ ಶಿಕ್ಷಕ ವೃಂದದವರು ಗ್ರಾ ಪಂ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಎಸ್ ಡಿ ಎಂ ಸಿ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ