ವಾಲಿಬಾಲ್: ವಿಭಾಗಮಟ್ಟಕ್ಕೆ ಬುಧೇರಾ ತಂಡ

ಬೀದರ್: ಸೆ.9:ತಾಲ್ಲೂಕಿನ: ಬುಧೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡ ಕಲಬುರಗಿ ವಿಭಾಗಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದೆ.
ಬೀದರ್‍ನ ಎನ್.ಎಫ್.ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಾಲೆ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಅರ್ಹತೆ ಗಳಿಸಿದೆ ಎಂದು ಶಾಲೆಯ ಮುಖ್ಯಶಿಕ್ಷಕ ಬಸಯ್ಯ ಸ್ವಾಮಿ ತಿಳಿಸಿದ್ದಾರೆ.