
ಬೀದರ್:ಮಾ.2: ನೆಹರೂ ಯುವ ಕೇಂದ್ರ ಹಾಗೂ ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ವತಿಯಿಂದ ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಪುರುಷರ ವಿಭಾಗದ ವಾಲಿವಾಲ್ ಪಂದ್ಯಾವಳಿಯಲ್ಲಿ ಹುಮನಾಬಾದ್ ತಾಲ್ಲೂಕಿನ ಹುಡುಗಿ ತಂಡ ಟ್ರೋಫಿ ಗೆದ್ದುಕೊಂಡಿತು.
ಭಾಲ್ಕಿ ತಾಲ್ಲೂಕಿನ ಕಣಜಿ ತಂಡವನ್ನು ಸೋಲಿಸಿ, ವಿಜಯ ಪತಾಕೆ ಹಾರಿಸಿತು. ಮಹಿಳಾ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ಕಮಠಾಣ ತಂಡ ಪ್ರಥಮ ಸ್ಥಾನ ಗಳಿಸಿತು. ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.
ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ, ಪ್ರಾಯೋಜಕ ಭೀಮಾಶಂಕರ ಪಾಟೀಲ ಕಾಡವಾದ ಅವರು ಗುಂಪು ಹಾಗೂ ವೈಯಕ್ತಿಕ ವಿಭಾಗದ ವಿಜೇತರಿಗೆ ಟ್ರೋಫಿ ಹಾಗೂ ಪ್ರಮಾಣ ಪತ್ರ ವಿತರಿಸಿದರು.
ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಬಿ.ವಿ. ಭೂಮರಡ್ಡಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ, ಬೀದರ್ ಮೈನಾರಿಟಿ ಸ್ಪೋಟ್ರ್ಸ್ ಅಸೋಸಿಯೇಷನ್ ಅಧ್ಯಕ್ಷ ಮುಬಾರಕ್ ಮಂದಕನಳ್ಳಿ, ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕ ಶಿವಕುಮಾರ ಗಡ್ಡೆ, ನೆಹರೂ ಯುವ ಕೇಂದ್ರದ ಲೆಕ್ಕಾಧಿಕಾರಿ ಪವನ್, ಷರೀಫ್ ಶೇಕ್, ಸಂಜುಕುಮಾರ ಬಾಪೂರ, ಶಿವಕುಮಾರ, ಸೋಮನಾಥ ಪೂಜಾರಿ, ಸಚಿನ್, ಇರ್ಫಾನ್, ಸುಲೇಮಾನ್ ಇದ್ದರು.