ವಾಲ್ಮೀಕಿ ರಾಮಾಯಣ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ’ ಅನಿಲ್ ಕುಮಾರ

ಕೊಟ್ಟೂರು, ಅ.31: ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ. ವಾಲ್ಮೀಕಿ ರಾಮಾಯಣ ದೇಶ-ಭಾಷೆಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ ಎಂದು ತಹಶೀಲ್ದಾರ ಜಿ.ಅನಿಲ್ ಕುಮಾರ್ ಹೇಳಿದರು.
ತಾಲೂಕು ಆಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಿ ಮಾತನಾಡಿದರು. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ ಎಂದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಸಿಬ್ಬಂದಿ ಆರ್.ಐ ಹಾಲಸ್ವಾಮಿ, ಕಂದಾಯ ಇಲಾಯ ಗುರುಬಸವರಾಜ, ಹರಪನಹಳ್ಳಿ ರವಿ, ರಮೇಶ ಸೇರಿದಂತೆ ಇತರರು ಇದ್ದರು.